March 4, 2026

ಕಂದಕಕ್ಕೆ ಉರುಳಿದ ಸಾರಿಗೆ ಬಸ್‌: 16 ಮಂದಿಗೆ ಗಾಯ

0
image_editor_output_image-1170141860-1758700914592.jpg

ದಾವಣಗೆರೆ/ ವಿಜಯನಗರ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್‌ ಕಂದಕಕ್ಕೆ ಉರುಳಿದ ಘಟನೆ ವಿಜಯನಗರ ) ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಣಿವೆಹಳ್ಳಿಯಲ್ಲಿ ನಡೆದಿದೆ.

ಬಸ್‌ ಹೊಸಪೇಟೆಯಿಂದ – ದಾವಣಗೆರೆಗೆ ಹೊರಟಿತ್ತು. ಮಾರ್ಗ ಮಧ್ಯೆ ಕಣಿವೆಹಳ್ಳಿ ಬಳಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಪರಿಣಾಮ 16 ಜನರಿಗೆ ಸಣ್ಣ, ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹರಪನಹಳ್ಳಿ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬಸ್‌ ಕಂದಕಕ್ಕೆ ಉರುಳಿದ್ದರೂ ಸಹ ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹರಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!