ಬೆಳ್ತಂಗಡಿ: ರಸ್ತೆ ಬದಿಯ ಮೋರಿಗೆ ಉರುಳಿ ಬಿದ್ದ ಕಾರು
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಮೋರಿಗೆ ಉರುಳಿ ಬಿದ್ದ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಡಾಜೆಯ ತಿರುವಿನ ಬಳಿ ಚಾರ್ಮಾಡಿ ಕಡೆಯಿಂದ ಉಜಿರೆಯತ್ತ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಉರುಳಿ ಬಿದ್ದಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.




