March 5, 2026

ಪಿಜಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ

0
image_editor_output_image-34028079-1758892365871.jpg

ಬಾಗಲಕೋಟೆ: ನಗರದ ವಿದ್ಯಾಗಿರಿಯ ಖಾಸಗಿ ಪಿಜಿಯೊಂದರಲ್ಲಿ ಯುವತಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸಾವಿಗೀಡಾದ ವಿದ್ಯಾರ್ಥಿನಿಯನ್ನು ಸುನಗ ತಾಂಡಾದ ಸೀಮಾ ರಾಠೋಡ (17) ಎಂದು ಗುರುತಿಸಲಾಗಿದೆ. ನಗರದ ಪಿಯು ಕಾಲೇಜೊಂದರಲ್ಲಿ ಪ್ರಥಮ ವರ್ಷದ ಪಿಯುಸಿ ಓದುತ್ತಿದ್ದಳು. ಪಿಜಿಯಲ್ಲಿ ಕೆಲವು ವಿದ್ಯಾರ್ಥಿನಿಯರು ರೂಮ್ ಒಳಗೆ ಹೋಗುತ್ತಿದ್ದಂತೆ ಯುವತಿಯ ಮೃತದೇಹ ಸ್ಲ್ಯಾಬ್‍ನ ಹುಕ್‍ನಲ್ಲಿ ನೇತಾಡುತ್ತಿರುವುದನ್ನು ಕಂಡು ಕಿರುಚಾಡುತ್ತ ಹೊರಗೆ ಓಡಿ ಬಂದಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವತಿಯ ಪೋಷಕರು ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!