March 5, 2026

ಉಡುಪಿ: ಎ.ಕೆ.ಎಂ.ಎಸ್ ಬಸ್ ಮಾಲಕ ಸೈಫುದ್ದೀನ್ ಕೊಲೆ: ಸ್ಥಳಕ್ಕೆ ಎಸ್ಪಿ ಹರಿರಾಮ್ ಶಂಕರ್ ಭೇಟಿ, ಪರಿಶೀಲನೆ

0
image_editor_output_image-491256698-1758961544220.jpg

ಉಡುಪಿ: ಎ.ಕೆ.ಎಂ.ಎಸ್ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯದ ನಡೆದ ಸ್ಥಳಕ್ಕೆ ಎಸ್ಪಿ ಹರಿರಾಮ್ ಶಂಕರ್ ಆಗಮಿಸಿದ ಪರಿಶೀಲನೆ ನಡೆಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂವರಿಂದ ಈ ಕೃತ್ಯ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಆರೋಪಿಗಳು ಚಾಲಕರರಾಗಿರುವ ಶಂಕೆಯಿದೆ ಎಂದು ತಿಳಿಸಿದರು. ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂಬುವುದು ಇನ್ನಷ್ಟೇ ತಿಳಿದು ಬರಬೇಕಿದೆ. ಮಾರಾಕಾಸ್ತಗಳಿಂದ ಕೊಚ್ಚಿ ಕೊಲೈಗೈದಿರುವ ಕುರಿತು ಮಾಹಿತಿ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.

ಸೈಫುದ್ದೀನ್ ಅವರು ತಮ್ಮ ಮನೆಯಲ್ಲಿ ಒಬ್ಬರೇ ಇರುವ ವೇಳೆ ಆಗಮಿಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವುದಾಗಿ ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!