March 5, 2026

ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಥಾರ್ ಕಾರು: ಐವರು ಸಾವು, ಓರ್ವ ಗಂಭೀರ

0
image_editor_output_image-1762784638-1758963446377.jpg

ಚಂಡೀಗಢ: ವೇಗವಾಗಿ ಬಂದ ಥಾರ್ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ.

ಅತಿವೇಗದ ಚಾಲನೆಯಿಂದ ಚಾಲಕನ ನಿಯಂತ್ರಣ ತಪ್ಪಿ ಥಾರ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಇನ್ನೋರ್ವ ಗಾಯಾಳುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಭೀಕರ ಅಪಘಾತದ ಪರಿಣಾಮ ಥಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ.

Leave a Reply

Your email address will not be published. Required fields are marked *

error: Content is protected !!