August 6, 2026

ಪುತ್ತೂರು: ಯುವತಿ ಜನ್ಮ ನೀಡಿದ ಮಗು ಕೃಷ್ಣನದ್ದೇ: ಡಿಎನ್ಎ ಪರೀಕ್ಷೆಯಲ್ಲಿ ಸಾಬೀತು

0
image_editor_output_image1476667626-1758967622240.jpg

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಮಗು ಕರುಣಿಸಿ ಮದುವೆಯಾಗಲು ನಿರಾಕರಿಸಿದ್ದ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ.ರಾವ್ ಪ್ರಕರಣ ಇದೀಗ ಮಹತ್ವದ ಘಟ್ಟ ತಲುಪಿದೆ.

ಯುವತಿಗೆ ಜನಿಸಿದ್ದ ಮಗುವಿನ ತಂದೆ ಆರೋಪಿ ಕೃಷ್ಣ ಜೆ.ರಾವ್ ಎಂಬುದು ಡಿಎನ್ಎ ಪರೀಕ್ಷೆಯಿಂದ ದೃಢಪಟ್ಟಿರುವುದಾಗಿ ಯುವತಿಯ ಕುಟುಂಬದವರು ಹಾಗೂ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕೆಪಿ ನಂಜುಂಡಿ ತಿಳಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ನ್ಯಾಯಕ್ಕಾಗಿ ಸಂತ್ರೆಸ್ತೆ ಕುಟುಂಬ ಕಾನೂನು ಹೋರಾಟ ನಡೆಸುತ್ತಿತ್ತು. ಇದೀಗ ಪ್ರಕರಣ ಮಹತ್ವದ ಹಂತ ತಲುಪಿದೆ.

ಪುತ್ತೂರು ನ್ಯಾಯಾಧೀಶರ ಸಮ್ಮುಖದಲ್ಲಿ ಆರೋಪಿ ಕೃಷ್ಣ ಜೆ.ರಾವ್, ಸಂತ್ರಸ್ತೆ ಹಾಗೂ ಮಗುವಿನ ರಕ್ತ ಸಂಗ್ರಹಿಸಲಾಗಿತ್ತು. ಬಳಿಕ ಬೆಂಗಳೂರಿನ ಪ್ರಯೋಗಾಲಯಕ್ಕೆ ರಕ್ತ ಸಂಗ್ರಹ ಮಾದರಿಯನ್ನು ಕಳುಹಿಸಲಾಗಿತ್ತು. ಆರೋಪಿ ಕೃಷ್ಣ ಜೆ.ರಾವ್ ಕುಟುಂಬ ಡಿಎನ್ಎ ಟೆಸ್ಟ್ ಮಾಡಿಸುವಂತೆ ಒತ್ತಾಯಿಸಿತ್ತು. ಇದೀಗ ಡಿಎನ್ಎ ಟೆಸ್ಟ್ ಪಾಸಿಟಿವ್ ಬಂದಿದೆ. ಕೃಷ್ಣ ಜೆ.ರಾವ್ನಿಂದಲೇ ಸಂತ್ರಸ್ತೆ ಗರ್ಭಾವತಿಯಾಗಿರುವುದು ಸಾಬೀತಾಗಿದೆ. ಹೀಗಾಗಿ ಹಿಂದೂ ಸಂಘಟನೆಗಳೇ ಮುಂದೆ ನಿಂತು ಇಬ್ಬರ ಮದುವೆ ಮಾಡಿಸಬೇಕು. ನಮಗೆ ಕಾನೂನು ಹೋರಾಟಕ್ಕೆ ಇಷ್ಟವಿಲ್ಲ. ಇಬ್ಬರು ಒಂದಾಗಿ ಬಾಳಬೇಕು ಎಂಬುದು ನಮ್ಮ ಇಚ್ಛೆ. ಹಿಂದುತ್ವದ ಭದ್ರಕೋಟೆ ಪುತ್ತೂರಿನಲ್ಲಿರುವ ಹಿಂದೂ ಮುಖಂಡರು ಮುಂದೆ ಬರಬೇಕು. ಎರಡೂ ಕುಟುಂಬಗಳನ್ನು ಒಂದು ಮಾಡುವ ಕೆಲಸ ಮಾಡಬೇಕು ಎಂದು ಕೆಪಿ ನಂಜುಂಡಿ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!