ನಟ ವಿಜಯ್ ರಾಜಕೀಯ ರಾಲಿಯಲ್ಲಿ ಕಾಲ್ತುಳಿತ: 20ಕ್ಕೂ ಅಧಿಕ ಮಂದಿ ಸಾವು
ಕರೂರು: ನಟ ರಾಜಕಾರಣಿ ವಿಜಯ್ ಅವರ ರಾಜಕೀಯ ರಾಲಿಯಲ್ಲಿ ಉಂಟಾದ ಕಾಲ್ತುಳಿತಕ್ಕೆ ಕನಿಷ್ಟ 20 ಮಂದಿ ಸಾವನಪ್ಪಿದ್ದಾರೆ ಎಂದು ವರದಿಯಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನ ಕರೂರಿನಲ್ಲಿ ಇಂದು ನಡೆದ ನಟ-ರಾಜಕಾರಣಿ ವಿಜಯ್ ದಳಪತಿ ರ‍್ಯಾಲಿಯಲ್ಲಿ ಈ ಕಾಲ್ತುಳಿತ ಉಂಟಾಗಿದೆ.
ಮೂವರು ಮಕ್ಕಳು ಮತ್ತು ವಯಸ್ಕರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಮೃತ ವಯಸ್ಕರು, ವಿಜಯ್ ಅವರ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಬೆಂಬಲಿಗರಾಗಿದ್ದರು. ರ‍್ಯಾಲಿಗಾಗಿ ಕನಿಷ್ಠ ಆರು ಗಂಟೆಗಳ ಕಾಲ ಕಾದಿದ್ದರು. ಸ್ಥಳಕ್ಕೆ ರ‍್ಯಾಲಿ ತಡವಾಗಿ ಬಂದಿತು. ಹೀಗಾಗಿ, ಹೆಚ್ಚಿನ ಜನಸಂದಣಿಯಾಗಿ ಕಾಲ್ತುಳಿತ ಸಂಭವಿಸಿದೆ.




