May 2, 2026

ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಢಿಕ್ಕಿ: ಮೂವರು ಯುವಕರು ಸಾವು

0
image_editor_output_image-441526223-1759044159628.jpg

ಹಾಸನ: ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಸಾವನ್ನಪ್ಪಿರುವಂತಹ ಭೀಕರ ಘಟನೆಯೊಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ಶನಿವಾರ ರಾತ್ರಿ ನಡೆದಿದೆ.

ಇರ್ಫಾನ್(25), ತರುಣ್(26) ಮತ್ತು ರೇವಂತ್(27) ಮೃತ ಯುವಕರು. ಹಳ್ಳಿಮೈಸೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೃತರು ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿಗಳು ಎನ್ನಲಾಗುತ್ತಿದೆ. ಕೆಎಸ್ಆರ್ಟಿಸಿ ಬಸ್ ಹಾಸನದಿಂದ ಮೈಸೂರು ಕಡೆಗೆ ಹೊರಟಿತ್ತು. ಮೈಸೂರು ಕಡೆಯಿಂದ ಒಂದೇ ದ್ವಿಚಕ್ರ ವಾಹನದಲ್ಲಿ ಮೂವರು ಯುವಕರು ಬರುತ್ತಿದ್ದರು. ಈ ವೇಳೆ ಭೀಕರ ಅಪಘಾತ ಸಂಭವಿಸಿದೆ.

Leave a Reply

Your email address will not be published. Required fields are marked *

error: Content is protected !!