March 13, 2026

ಉಡುಪಿ: ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

0
image_editor_output_image255428728-1759055429823.jpg

ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 27ರಂದು ನಡೆದ ಖಾಸಗಿ ಬಸ್ ಮಾಲೀಕ ಸೈಫುದ್ದೀನ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಉಡುಪಿಯ ಮಿಷನ್ ಕಾಂಪೌಂಡ್ ನಿವಾಸಿ ಮೊಹಮ್ಮದ್ ಫೈಸಲ್ ಖಾನ್ (27), ಕುಂಜಿಬೆಟ್ಟು, ಕರಂಬಳ್ಳಿ ನಿವಾಸಿ ಮೊಹಮ್ಮದ್ ಶರೀಫ್ (37) ಮತ್ತು ಕಾಟಿಪಳ್ಳ ನಿವಾಸಿ ಅಬ್ದುಲ್ ಶುಕುರ್ (43) ಎಂದು ಗುರುತಿಸಲಾಗಿದೆ.

ಬಂಧನದ ಬಳಿಕ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ಉಡುಪಿ ಉಪವಿಭಾಗದ ಡಿವೈಎಸ್‌ಪಿ ಡಿ ಟಿ ಪ್ರಭು ಅವರ ಮಾರ್ಗದರ್ಶನದಲ್ಲಿ, ಮಲ್ಪೆ ವೃತ್ತ ನಿರೀಕ್ಷಕ (ಸಿಪಿಐ) ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ಹಾಗೂ ಮಲ್ಪೆ ಠಾಣೆಯ ಪಿಎಸ್‌ಐ ಅನಿಲ್ ಕುಮಾರ್ ಡಿ ಮತ್ತು ಅವರ ತಂಡವು ಈ ಕಾರ್ಯಾಚರಣೆಯನ್ನು ನಡೆಸಿತು.

Leave a Reply

Your email address will not be published. Required fields are marked *

error: Content is protected !!