March 20, 2026

ಮನೆಯಲ್ಲಿ ನಿಗೂಢ ಸ್ಫೋಟ ಪ್ರಕರಣ: ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಸಾವು

0
image_editor_output_image-1865366706-1759323358472.jpg

ಹಾಸನ: ಹಾಸನದ ಹಳೇಆಲೂರು ಪಟ್ಟಣದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮೃತರನ್ನು ಸುದರ್ಶನ್ (32) ಮತ್ತು ಕಾವ್ಯ (27) ಎಂದು ಗುರುತಿಸಲಾಗಿದೆ.

ಸೋಮವಾರ ರಾತ್ರಿ 8:30 ರ ಸಮಯದಲ್ಲಿ ಮನೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿತ್ತು. ಮನೆಯಲ್ಲಿದ್ದ ಎರಡು ಸಿಲಿಂಡರ್‌ ಹಾಗೂ ಗೀಸರ್‌ ಹಾಗೇ ಇದ್ದೂ ಸ್ಫೋಟಕ್ಕೆ ಕಾರಣವೇನು ಎಂಬುದು ನಿಗೂಢವಾಗಿಯೇ ಉಳಿದಿತ್ತು. ಸಿಡಿಮದ್ದು ತಯಾರಿಕೆ ಮಾಡುತ್ತಿದ್ದ ಮದ್ದು ಸ್ಫೋಟಗೊಂಡು ಈ ದುರಂತ ನಡೆದಿರುವುದು ಗೊತ್ತಾಗಿದೆ.

ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ತಕ್ಷಣವೇ ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪರಿಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಯಿತು.

Leave a Reply

Your email address will not be published. Required fields are marked *

error: Content is protected !!