ಬಂಟ್ವಾಳ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
ಬಂಟ್ವಾಳ : ಅನಾರೋಗ್ಯ ಹಾಗೂ ಮಗನ ಚಿಂತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಗುಡ್ಡೆ ಎಂಬಲ್ಲಿ ನಡೆದಿದೆ.
ಕಾವಳಮೂಡೂರು ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಉಮಾವತಿ (68) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 15 ವರ್ಷಗಳ ಹಿಂದೆ ಉಮಾವತಿಯವರ ಮಗ ಮನೆ ಬಿಟ್ಟು ಹೋಗಿ ಕಾಣೆಯಾಗಿದ್ದಾರೆ. ಮಗನ ಚಿಂತೆಯಿಂದ ರಕ್ತದ ಒತ್ತಡ ಕಾಯಿಲೆಯಿಂದ ಬಳಲುತ್ತಿದ್ದರು. ಹಾಗಾಗಿ ಮಾನಸಿಕವಾಗಿ ನೊಂದುಕೊಂಡು ಜೀವನದಲ್ಲಿ ಜುಗುಪ್ಪೆ ಹೊಂದಿದ್ದ ಅವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಪುಂಜಾಲಕಟ್ಟೆ ಪೋಲಿಸ್ ಠಾಣೆಯಲ್ಲಿ ಮೃತರ ಕುಟುಂಬದವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.




