July 4, 2026

ದುರ್ಗಾದೇವಿ ವಿಸರ್ಜನೆ ವೇಳೆ ದುರಂತ: ಮಹಿಳೆಯರು ಸೇರಿದಂತೆ 11 ಮಂದಿ ಸಾವು

0
image_editor_output_image-816277531-1759468959394.jpg

ಖಾಂಡ್ವಾ: ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಭೀಕರ ದುರಂತ ಸಂಭವಿಸಿದೆ. ದುರ್ಗಾ ಮೂರ್ತಿಯ ವಿಸರ್ಜನೆ ವೇಳೆ, ಟ್ರ್ಯಾಕ್ಟರ್ ಟ್ರಾಲಿಯೊಂದು ನದಿಗೆ ಬಿದ್ದು 8 ಮಹಿಳೆಯರು ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ. ಅಬ್ನಾ ನದಿಯ ಬಳಿ ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ.

ಖಾಂಡ್ವಾ ಜಿಲ್ಲೆಯ ಪಂಧನಾ ಪ್ರದೇಶದಲ್ಲಿ ವಿಸರ್ಜನೆಗಾಗಿ ದುರ್ಗಾದೇವಿ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್-ಟ್ರಾಲಿಯು ಕೆರೆಗೆ ಉರುಳಿದ ಪರಿಣಾಮ ಕನಿಷ್ಠ 11 ಭಕ್ತರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಇಂದೋರ್ ಗ್ರಾಮಾಂತರ ವ್ಯಾಪ್ತಿಯ ಮಹಾನಿರೀಕ್ಷಕ ಅನುರಾಗ್ ತಿಳಿಸಿದ್ದಾರೆ. ನಿಮಜ್ಜನಕ್ಕಾಗಿ ವಿವಿಧ ಗ್ರಾಮಗಳಲ್ಲಿ ಪ್ರತಿಷ್ಠಾಪಿಸಲಾದ ದುರ್ಗಾದೇವಿ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ನಲ್ಲಿ ಭಕ್ತರು ತೆರಳುತ್ತಿದ್ದರು ಎಂದು ಅವರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದರು.

ಇದುವರೆಗೆ 11 ಮೃತದೇಹಗಳನ್ನು ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ಸ್ಥಳೀಯ ಮುಳುಗು ತಜ್ಞರ ಸಹಾಯದಿಂದ ಹೊರತೆಗೆಯಲಾಗಿದೆ ಎಂದು ಅವರು ಹೇಳಿದರು. ಹೆಚ್ಚುವರಿಯಾಗಿ ಎಸ್‌ಡಿಆರ್‌ಎಫ್ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಐದರಿಂದ ಆರು ಭಕ್ತರು ಬದುಕುಳಿದಿದ್ದಾರೆ ಎಂಬುದು ತಿಳಿದುಬಂದಿದೆ. ಅಪಘಾತದ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಅವರು ತಿಳಿಸಿದರು

Leave a Reply

Your email address will not be published. Required fields are marked *

You may have missed

error: Content is protected !!