July 4, 2026

ಬಂಟ್ವಾಳ: ರಸ್ತೆ ದಾಟುವ ವೇಳೆ ರಿಕ್ಷಾ ಢಿಕ್ಕಿ: ಸಜೀಪ ಮೂಡದ ನಿವಾಸಿ ಮೃತ್ಯು

0
image_editor_output_image-912503029-1759470268459.jpg

ಬಂಟ್ವಾಳ: ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅಮ್ಮೂರು ಕ್ರಾಸ್ ನಲ್ಲಿ ನಡೆದಿದೆ.

ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ದಿ.ಮುತ್ತಪ್ಪ ಮೂಲ್ಯರ ಪುತ್ರ ಲೋಕೇಶ್ ಮೂಲ್ಯ(44) ಅವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಲೋಕೇಶ್ ಅವರು ಕಲ್ಲಡ್ಕದ ನಾಯರ ಪೆಟ್ರೋಲ್ ಪಂಪ್ ನ ಮುಂಭಾಗದಲ್ಲಿ ರಸ್ತೆಯನ್ನು ದಾಟುವ ವೇಳೆ ಅತೀ ವೇಗದಿಂದ ಬಂದ ರಿಕ್ಷಾ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ಕಳೆದುಕೊಂಡು ಬಳಿಕ ಪಲ್ಟಿಯಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲೋಕೇಶ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ವೇಳೆ ಮೃತಪಟ್ಟ ಬಗ್ಗೆ ಪೋಲಿಸ್ ಇಲಾಖೆ ಮಾಹಿತಿ ನೀಡಿದೆ.

ರಿಕ್ಷಾದಲ್ಲಿ ಚಾಲಕನ ಪತ್ನಿ ಮಕ್ಕಳು ಹಾಗೂ ಮಾವ ಪ್ರಯಾಣಿಸುತ್ತಿದ್ದು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!