February 1, 2026

ಕಾರ್ಕಳ: ಕತ್ತು ಹಿಸುಕಿ ಮಗಳನ್ನು ಕೊಲೆಗೈದ ತಾಯಿ

0
image_editor_output_image-394121636-1759559829262.jpg

ಕಾರ್ಕಳ: ಪ್ರೀತಿಯ ಕಾರಣಕ್ಕೆ ಮನೆ ಬಿಟ್ಟು ಹೋಗುವುದಾಗಿ ಹೇಳಿದ ಮಗಳನ್ನು ತಾಯಿಯೇ ಕೊಲೆ ಮಾಡಿರುವ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿ ಎಂಬಲ್ಲಿ ನಡೆದಿದ್ದು, ಆತ್ಮಹತ್ಯೆ ಎಂದು ಬಿಂಬಿಸಲು ಹೋಗಿ ಮರಣೋತ್ತರ ಪರೀಕ್ಷೆಯಲ್ಲಿ ಕೊಲೆ ಎಂದು ತಿಳಿದು ಬಂದಿದೆ.

ಹಿರ್ಗಾನ ನಿವಾಸಿ ಶೇಖ್ ಮುಸ್ತಫಾ ಎಂಬವರ ಮಗಳು ಶಿಫನಾಝ್ (17) ಮೃತಳು. ಆರೋಪಿ ಗುಲ್ಝಾರ್ ಬಾನು (45) ಅವರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸೆಪ್ಟೆಂಬರ್ 20ರಂದು ತಾಯಿ-ಮಗಳ ನಡುವೆ ಪ್ರೀತಿಯ ವಿಚಾರದಲ್ಲಿ ಜಗಳ ಉಂಟಾಗಿತ್ತು.

ಶಿಫನಾಝ್ ತನ್ನ ಗೆಳೆಯನೊಂದಿಗೆ ಮನೆ ಬಿಟ್ಟು ಹೋಗುವುದಾಗಿ ಹೇಳಿದ್ದರಿಂದ ಕುಪಿತಗೊಂಡ ತಾಯಿ, ಮಗಳ ಬಾಯಿಗೆ ಬಟ್ಟೆ ತುರುಕಿಸಿ, ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ನಂತರ, ಶಿಫನಾಝ್ ತಂದೆ ಮುಸ್ತಫಾ ಅವರು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಶಿಫನಾಝ್ ಅವರನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂಬುದು ತಿಳಿದುಬಂದಿತ್ತು. ಪೊಲೀಸರು ಹೆತ್ತವರನ್ನು ವಿಚಾರಿಸಿದಾಗ ಸತ್ಯ ಹೊರಬಂದಿದೆ. ತಾಯಿಯೇ ಮರ್ಯಾದೆಗಂಜಿ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ. ಅಕ್ಟೋಬರ್ 2ರಂದು ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!