July 4, 2026

ಜೈಲ್ ನಲ್ಲೇ ರೌಡಿಶೀಟರ್ ಭರ್ಜರಿ ಬರ್ತ್ಡೇ ಪಾರ್ಟಿ: ವಿಡಿಯೋ ವೈರಲ್

0
image_editor_output_image-25481150-1759565574345.jpg

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲೇ ರೌಡಿಶೀಟರ್‌ವೊಬ್ಬ ಕೇಕ್ ಕಟ್ ಮಾಡಿ ಭರ್ಜರಿಯಾಗಿ ಬರ್ತ್‌ಡೇ ಪಾರ್ಟಿ ಮಾಡಿರುವ ಘಟನೆ ನಡೆದಿದೆ.

ದರ್ಶನ್ ಕೇಸ್ ಬಳಿಕ ಜೈಲಿನಲ್ಲಿ ರಾಜಾತಿಥ್ಯಕ್ಕೆ ಬ್ರೇಕ್ ಹಾಕಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದರು. ಆದರೆ, ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವೀಡಿಯೋದಲ್ಲಿ ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡ ಬಯಲಾಗಿದೆ.

ಜೈಲಿನಲ್ಲಿ ಕೈದಿಗಳ ಕಳ್ಳಾಟ ಇನ್ನೂ ನಿಂತಿಲ್ಲ. ವಿಚಾರಣಾಧೀನ ಕೈದಿಗಳ ಕಳ್ಳಾಟಕ್ಕೆ ಬ್ರೇಕ್ ಇಲ್ಲ ಎಂಬಂತಾಗಿದೆ. ನಟೋರಿಯಸ್ ರೌಡಿಶೀಟರ್ ಶೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನಾ ಜೈಲಲ್ಲೇ ಭರ್ಜರಿಯಾಗಿ ಬರ್ತ್ಡೇ ಸೆಲಬ್ರೇಟ್ ಮಾಡಿಕೊಂಡಿದ್ದಾನೆ.

ಆ್ಯಪಲ್ ಹಾರ ಹಾಕಿಕೊಂಡು ಜೈಲಿನ ಬ್ಯಾರಕ್‌ನಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ. ಈತ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ ನಟೋರಿಯಸ್ ರೌಡಿಶೀಟರ್. ಮೊಬೈಲ್‌ನಲ್ಲಿ ಬರ್ತ್ಡೇ ಪಾರ್ಟಿಯ ವಿಡಿಯೋ, ಪೋಟೋ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!