February 1, 2026

ಮಲ್ಪೆ ಬೀಚ್ ನಲ್ಲಿ ಮುಳುಗಿ ಯುವಕ ಸಾವು, ಮತ್ತೋರ್ವ ನಾಪತ್ತೆ

0
image_editor_output_image-1666643932-1759566290228.jpg

ಉಡುಪಿ: ಮಲ್ಪೆ ಬೀಚ್ ನಲ್ಲಿ ಈಜಾಡುತ್ತಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.

ಹಾಸನ ಮೂಲದ ಮಿಥುನ್ ಮತ್ತು ಶಶಾಂಕ್ ನೀರುಪಾಲಾಗಿದ್ದಾರೆ. ಇದನ್ನು ಗಮನಿಸಿದ ಸಹ ಪ್ರವಾಸಿಗರು ಶಶಾಂಕ್ ನನ್ನು ರಕ್ಷಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಶನಿವಾರ ಮುಂಜಾನೆ ಚಿಕಿತ್ಸೆ ಫಲಿಸದೆ ಆತ ಕೊನೆಯುಸಿರೆಳೆದಿದ್ದಾನೆ.

ಮಿಥುನ್ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.

ದಸರಾ ರಜೆ ಹಿನ್ನೆಲೆಯಲ್ಲಿ ಸಾವಿರಾರು ಪ್ರವಾಸಿಗರು ಉಡುಪಿಗೆ ಆಗಮಿಸುತ್ತಿದ್ದಾರೆ. ಆದರೆ ಕೇವಲ ಮೂರು ಜನ ಲೈಫ್ ಗಾರ್ಡ್ ಗಳನ್ನುಮಾತ್ರ ನಿಯೋಜನೆ ಮಾಡಲಾಗಿದೆ. ಈಜು ಬಾರದ ಮೂವರು ಲೈಫ್ ಗಾರ್ಡ್ ನಿಯೋಜನೆ ಮಾಡಿದ್ದು, ಮಲ್ಪೆ ಬೀಚ್ ನಿರ್ವಹಣೆ ಬಗ್ಗೆ ಉಡುಪಿ ಜಿಲ್ಲಾಡಳಿತ ಭಾರೀ ನಿರ್ಲಕ್ಷ್ಯ ತೋರುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

Leave a Reply

Your email address will not be published. Required fields are marked *

error: Content is protected !!