July 4, 2026

ಉಡುಪಿ: ಖಾಸಗಿ ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣ: ಒಳಸಂಚು ರೂಪಿಸಿದ ಆರೋಪಿ ಮಹಿಳೆಯ ಬಂಧನ

0
image_editor_output_image-1105259713-1759589340808

ಉಡುಪಿ: ಖಾಸಗಿ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸೆಂಬಂಧಿಸಿ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು ಇದೀಗ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾದ ನಾಲ್ಕನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಮಹಿಳೆಯನ್ನು ಉಡುಪಿ ಮಿಷನ್ ಕಂಪೌಂಡ್ ನಿವಾಸಿ ರಿಧಾ ಶಭನಾ(27) ಎನ್ನಲಾಗಿದೆ.

ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸೆಂಬಂಧಿಸಿ ಉಡುಪಿ ಮಿಷನ್ ಕಂಪೌಂಡ್ ನಿವಾಸಿ ಮಹಮದ್ ಫೈಸಲ್ ಖಾನ್ (27 ವ), ಕರಂಬಳ್ಳಿ ನೆವಾಸಿ ಮೊಹಮ್ಮದ್ ಶರೀಫ್ (37 ವ) ಮತ್ತು ಮಂಗಳೂರು ಕಾಟಿಪಳ್ಳ ನಿವಾಸಿ ಅಬ್ದುಲ್ ಶುಕುರ್ (43 ವ) ಎಂಬವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು ಇದೀಗ ಮಹಿಳಾ ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇದರೊಂದಿಗೆ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!