4 ತಿಂಗಳ ಮಗುವನ್ನು ನೀರಿನ ಡ್ರಮ್‌ನಲ್ಲಿ ಮುಳುಗಿಸಿ ಹತ್ಯೆ: ಬಳಿಕ ತಂದೆಯೂ ಆತ್ಮಹತ್ಯೆ
ಮಹಾರಾಷ್ಟ್ರ: ತಂದೆಯೊಬ್ಬ ನಾಲ್ಕು ತಿಂಗಳ ಮಗುವನ್ನು ನೀರಿನ ಡ್ರಮ್‌ನಲ್ಲಿ ಮುಳುಗಿಸಿ ಹ*ತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಅಮೋಲ್ ಸೋನಾವಾನೆ ಕೃತ್ಯ ಎಸಗಿದ ವ್ಯಕ್ತಿ. ಈತ ತನ್ನ ಮಗನನ್ನು ಅರ್ಧ ನೀರು ತುಂಬಿದ ಡ್ರಮ್‌ಗೆ ಎಸೆದು ಕೊಂ*ದಿದ್ದಾನೆ ಎಂದು ವರದಿಯಾಗಿದೆ.
ಕೆಲವು ದಿನಗಳ ಹಿಂದೆ, ಅಮೋಲ್ ಮತ್ತು ಆತನ ಪತ್ನಿ ಕೌಟುಂಬಿಕ ಕಲಹದ ನಂತರ ಆ*ತ್ಮಹ*ತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಆದರೆ ಸರಿಯಾದ ಸಮಯಕ್ಕೆ ಅವರನ್ನು ರಕ್ಷಿಸಲಾಗಿತ್ತು. ದಂಪತಿಯನ್ನು ಗುರುವಾರವಷ್ಟೇ(ಅ. 02) ಸ್ಥಳೀಯ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದರು.





