ವರದಕ್ಷಿಣೆ ಕಿರುಕುಳ: ವಿವಾಹಿತೆ ನೇಣುಬಿಗಿದು ಆತ್ಮಹತ್ಯೆ
ಬೆಂಗಳೂರು: ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ಬೆಂಗಳೂರು ಹೊರವಲಯದ ತಲಘಟ್ಟಪುರದ ಅವಲಹಳ್ಳಿಯಲ್ಲಿ ನಡೆದಿದೆ
ಮೃತಳನ್ನು ನವ್ಯ (28) ಎಂದು ಗುರುತಿಸಲಾಗಿದೆ. ನಾಲ್ಕು ವರ್ಷದ ಹಿಂದೆ ನವ್ಯ, ನಗರದ ಸಾಫ್ಟ್‌ವೇರ್ ಇಂಜಿನಿಯರ್ ಶೈಲೇಶ್‌ನನ್ನು ಮದುವೆಯಾಗಿದ್ದಳು. ಇತ್ತೀಚೆಗೆ ಪತಿ ಶೈಲೇಶ್ ಮತ್ತವರ ಮನೆಯವರು ವರದಕ್ಷಿಣೆ ತರುವಂತೆ ಮಹಿಳೆಗೆ ಕಿರುಕುಳ ನೀಡಿದ್ದರು ಎಂಬ ಆರೋಪ ಕೇಳಿ ಬಂದಿದೆ.
ವರದಕ್ಷಿಣೆ ಕಿರುಕುಳದಿಂದ ನೊಂದ ಮಹಿಳೆ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ಪತಿ ಶೈಲೇಶ್ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದ. ಆದರೆ ಚಿಕಿತ್ಸೆ ಫಲಕಾರಿಯಾದೇ ಸಾವನ್ನಪ್ಪಿದ್ದಾಳೆ.





