ಸೇತುವೆ ಮೇಲಿಂದ ಬಿದ್ದ ಕಾರು: ಓರ್ವ ಸಾವು, ನಾಲ್ವರು ಗಂಭೀರ
ಕೋಲಾರ: ಸೇತುವೆ ಮೇಲಿಂದ ಕಾರೊಂದು ಕೆಳಗೆ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆ ಕೆಜಿಎಫ್‌ನ ಕೃಷ್ಣಾವರಂ ಬಳಿ ನಡೆದಿದೆ.
ಕರ್ಣ (48) ಮೃತ ವ್ಯಕ್ತಿ. ಫೋರ್ಡ್ ಇಕೋಸ್ಪೋರ್ಟ್ ಕಾರು ಸೇತುವೆ ಮೇಲಿಂದ ಬಿದ್ದು ಘಟನೆ ಸಂಭವಿಸಿದೆ. ಘಟನೆಯಲ್ಲಿ ಉಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಮೆಲ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.




