ಮುಗಿಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಅಕ್ಟೋಬರ್ 18 ರವರೆಗೆ ಸರಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಣೆ
ಬೆಂಗಳೂರು : ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆ ಇನ್ನೂ ಮುಗಿಯದ ಕಾರಣ ಇದೀಗ ರಾಜ್ಯ ಸರಕಾರ ಶಿಕ್ಷಕರನ್ನು ಸಮೀಕ್ಷೆಗೆ ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ಇದರಿಂದ ಅಕ್ಟೋಬರ್ 18ರವರೆಗೆ ರಾಜ್ಯದ ಎಲ್ಲಾ ಸರಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದೆ.
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಇಂದು ಕೊನೆ ದಿನವಾಗಿದ್ದರಿಂದ ಸಿಎಂ ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದು, ಶಿಕ್ಷಕರನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಂಡು ಸಮೀಕ್ಷೆ ಪೂರ್ಣಗೊಳಿಸಲು ತೀರ್ಮಾನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಅಕ್ಟೋಬರ್ 18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ ನೀಡಲು ತೀರ್ಮಾನಿಸಲಾಗಿದೆ. ಸರ್ಕಾರಿ ಮತ್ತು ಅನುದಾನಿತ ಶಾಲಾ ಶಿಕ್ಷಕರಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ. ಹೀಗಾಗಿ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯವಾಗುವುದಿಲ್ಲ.




