February 2, 2026

ಅಂಬಾಗಿಲು ಜಂಕ್ಷನ್ ಬಳಿ ಖಾಸಗಿ ಬಸ್, ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸಾವು

0
image_editor_output_image-1570672067-1759903491919.jpg

ಉಡುಪಿ: ಖಾಸಗಿಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ಉಡುಪಿ ಸಮೀಪದ ಅಂಬಾಗಿಲು ಜಂಕ್ಷನ್ ರಾತ್ರಿ ನಡೆದಿದೆ.
ಮೃತರನ್ನು ಪುತ್ತೂರು ಸುಬ್ರಮಣ್ಯ ನಗರದ ರವಿ ಪೂಜಾರಿ (44) ಎಂದು ಗುರುತಿಸಲಾಗಿದೆ.

ಕುಂದಾಪುರದಿಂದ ಉಡುಪಿ ಕಡೆ ಬರುತ್ತಿದ್ದ ಖಾಸಗಿ ಬಸ್ ಬೈಕಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಬಸ್ಸಿನಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸವಾರ ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!