ಮಂಗಳೂರು: 12 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿ ಮತ್ತೆ ಜೈಲಿಗೆ ಕಳುಹಿಸಿದ್ದಾರೆ.
ಬಂಧಿತನನ್ನು ಅಲ್ತಾಪ್ (47) ಆರೋಪಿ ವಿರುದ್ದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣಾ ಅಕ್ರ 412/2004 U/s 143,147,148,323,427,506,149 ಐಪಿಸಿ ಪ್ರಕರಣ ದಾಖಲಾಗಿದ್ದು, 2 ನೇ ಸಿ.ಜೆ.ಎಂ ನ್ಯಾಯಾಲಯ ಮಂಗಳೂರು ಸಿ. ಸಿ ನಂಬ್ರ 12-2007 ರಲ್ಲಿ ವಿಚಾರಣೆ ನಡೆಯುತ್ತಿತ್ತು, ಆದರೆ ಆರೋಪಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆ ಮರೆಸಿಕೊಂಡಿದ್ದು ಮಾನ್ಯ ನ್ಯಾಯಾಲಯವು LPC ಪ್ರಕರಣವೆಂದು ಪರಿಗಣಿಸಿರುತ್ತದೆ. ಅದರಂತೆ ಆರೋಪಿಯ ಪತ್ತೆಯ ಬಗ್ಗೆ ಉತ್ತರ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಎ ಎಸ್ ಐ ಬಾಬು & ಪಿ ಸಿ 3264 ನೇ ಗುರು ಬಿ ಟಿ ಹಾಗೂ ಪಿ ಸಿ 311 ನೇ ಸುನಿಲ್ ಕುಮಾರ್ ಎನ್ ರವರೊಳಗೊಂಡ ತಂಡ ಕಾರ್ಯಾಚರಿಸಿ ದಿನಾಂಕ 05/10/2025 ರಂದು ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಮಂಗಳೂರು ನಗರದ ಬಂದರು ಪರಿಸರದಲ್ಲಿ ದಸ್ತಗಿರಿ ಮಾಡಿ ಮಂಗಳೂರಿನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.




