February 2, 2026

ವಿಟ್ಲ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಸಿಕ ಸಭೆ ಮತ್ತು ಮತಗಳ್ಳತನ ವಿರೋಧಿಸಿ ಸಹಿ ಅಭಿಯಾನಕ್ಕೆ ಚಾಲನೆ

0
IMG-20251009-WA0099

ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತುರವರ ಅಧ್ಯಕ್ಷತೆಯಲ್ಲಿ ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ ಹಾಗೂ ದೇಶದಲ್ಲಿ ನಡೆಯತ್ತಿರುವ ಮತ ಗಳ್ಳತನ ವಿರೋಧಿಸಿ ಸಹಿ ಅಭಿಯಾನಕ್ಕೆ ಚಾಲನೆ ಕಾರ್ಯಕ್ರಮ ಇಂದು ವಿಟ್ಲ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು,


ಮತಗಳ್ಳತನ ವಿರೋಧಿಸಿ ಸಹಿ ಅಭಿಯಾನಕ್ಕೆ ದ.ಕ ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್ ರವರು ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮುಹಮ್ಮದ್,ದ ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಉಸ್ತುವಾರಿ ಗೀತಾ ಸುವರ್ಣ, ದ.ಕ ಗ್ರಾಮೀಣ ಮಹಿಳಾ ಕಾಂಗ್ರೆಸ್ ಉಸ್ತುವಾರಿ ನಮಿತಾ ಡಿ ರಾವ್.ದ ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಮಾನಾಥ್ ವಿಟ್ಲ ಸೇರಿದಂತೆ ಹಿರಿಯ ಕಾಂಗ್ರೆಸ್ ಮುಖಂಡರು,ಮುಂಚೂಣಿ ಘಟಕದ ಅಧ್ಯಕ್ಷರುಗಳು,ವಲಯ ಅಧ್ಯಕ್ಷರುಗಳು,ಬೂತ್ ಅಧ್ಯಕ್ಷಗಳು,ಪಟ್ಟಣ ಪಂಚಾಯತ್ ಸದಸ್ಯರುಗಳು,ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು,ಗ್ರಾಮ ಪಂಚಾಯಿತಿ ಸದಸ್ಯರುಗಳು,ನಾಮನಿರ್ದೇಶೀತ ಸದಸ್ಯರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!