ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ
ಮಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್‌ನಲ್ಲಿ ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿವನ್ನು ನ್ಯಾಯಾಲಯ ವಜಾಗೊಳಿಸಿದೆ.
ಸರಕಾರದ ಪರ ವಕೀಲರು ಮಂಡಿಸಿದ ವಾದವನ್ನು ಎತ್ತಿ ಹಿಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜ ಅವರು ಅರ್ಜಿ ವಜಾ ಮಾಡಿದ್ದಾರೆ. ಮಹೇಶ್ ಶೆಟ್ಟಿಗೆ ಮುಂದೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ.
ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತ ವಾದ ಮಂಡಿಸಿದ್ದರು.
ಸೆ.16ರಂದು ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಶೋಧ ನಡೆಸಿದಾಗ ಎರಡು ತಲವಾರು, ಏರ್‌ಗನ್ ಪತ್ತೆಯಾಗಿತ್ತು. ಈ ಕಾರಣದಿಂದ ವಿಚಾರಣೆಗೆ ಹಾಜರಾಗಬೇಕೆಂದು ಎಸ್‌ಐಟಿ ನೋಟೀಸ್ ಜಾರಿ ಮಾಡಿತ್ತು. ತಿಮರೋಡಿ ಗಡೀಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.




