February 2, 2026

ಸುಳ್ಯ: ಮಿನಿ ಟೆಂಪೋ, ಬೈಕ್ ಅಪಘಾತ: ಬೈಕ್ ಸವಾರ ಸಾವು

0
image_editor_output_image1902869662-1760159557157.jpg

ಸುಳ್ಯ: ಬುಲೆಟ್ ಬೈಕ್ ಮತ್ತು ದೋಸ್ತ್ ಮಿನಿ ಟೆಂಪೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ.

ಕೇರಳ ಕಲ್ಲಪಳ್ಳಿಯ ಮೂಲೆಹಿತ್ಲು ನಿವಾಸಿ ಕೃಷಿಕರಾಗಿದ್ದ ಪ್ರದೀಪ್ (40) ಮೃತರು. ಸುಳ್ಯದಿಂದ ಕಲ್ಲಪಳ್ಲಿ ಕಡೆಗೆ ಹೋಗುತ್ತಿದ್ದ ಬುಲೆಟ್ ಬೈಕ್ ಹಾಗೂ ಸುಳ್ಯ ಕಡೆಗೆ ಬರುತ್ತಿದ್ದ ದೋಸ್ತ್ ವಾಹನದ ನಡುವೆ ಸುಳ್ಯ-ಆಲೆಟ್ಟಿ ರಸ್ತೆಯ ನಾಗಪಟ್ಟಣ ಸೇತುವೆ ಬಳಿ ಮುಖಾಮುಖಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಬುಲೆಟ್ ಸವಾರ ಪ್ರದೀಪ್ ಅವರನ್ನು ಸುಳ್ಯದ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಕರೆದೊಯ್ಯಲಾದರೂ ಅದಾಗಲೇ ಗಾಯಳು ಮೃತರಾಗಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!