ಕಲಬುರಗಿಯ ಕಾಂಗ್ರೆಸ್ ಶಾಸಕರ ಶಾಲೆಯಲ್ಲೇ RSS ಶಾಖೆ, ಬೈಠಕ್
ಬೆಂಗಳೂರು: ಆರ್ ಎಸ್ಎಸ್ ಶಾಖೆಗಳ ಮೇಲೆ ನಿರ್ಬಂಧ ವಿಧಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ರಾಜ್ಯಾದ್ಯಂತ ಸುದ್ದಿಯಾಗುತ್ತಿದೆ. ಈ ಬೆನ್ನಲ್ಲೇ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲಿ ಅದರಲ್ಲೂ ಕಾಂಗ್ರೆಸ್ ಶಾಸಕರ ಶಾಲೆಯಲ್ಲೇ ಆರ್ ಎಸ್ಎಸ್ ಶಾಖೆ ನಡೆಸಿರುವ ಸುದ್ದಿ ಎಲ್ಲೆಡೆ ವೈರಲ್ ಆಗತೊಡಗಿದೆ.
ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕರ್ನಾಟಕದಲ್ಲಿ RSS ನಿಷೇಧಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಶಾಸಕ ಎಂವೈ ಪಾಟೀಲ್ ಒಡೆತನದ ಮಹಾಂತೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಅನುದಾನಿತ ಶಾಲೆಯಲ್ಲಿ ಆರ್ಎಸ್ಎಸ್ ಬೈಠಕ್ ನಡೆದಿದೆ. ಅಷ್ಟೇ ಅಲ್ಲದೆ, ಶಾಲೆಯ ಆವರಣದಲ್ಲಿ ಆರ್ಎಸ್ಎಸ್ ಪಥಸಂಚಲನ, ಬೌದ್ಧಿಕ ಕಾರ್ಯಕ್ರಮ ಕೂಡ ನಡೆದಿದೆ.




