March 18, 2026

ವಿಟ್ಲ: ಹೆಣ್ಣು ನೋಡುವ ನೆಪದಲ್ಲಿ ಫೋಟೋ ವೀಡಿಯೋ ತೆಗೆದು ಲೀಕ್ ಮಾಡುವುದಾಗಿ ಬೆದರಿಸಿ, 44 ಲಕ್ಷ ರೂ. ವಂಚನೆ

0
IMG-20220615-WA0046

ವಿಟ್ಲ: ಹುಡುಗಿ ನೋಡುವ ವಿಚಾರದಲ್ಲಿ ಫೋಟೋ, ವೀಡಿಯೋ ತೆಗೆದು ಬೆದರಿಕೆ ಒಡ್ಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇರಳ ನಿವಾಸಿ ಮಹಮ್ಮದ್ ಅಶ್ರಫ್ ತಾವರಕಡನ್( 53) ಎಂಬವರು ಸೌದಿಯಲ್ಲಿ ಉದ್ಯೋಗದಲ್ಲಿದ್ದಾರೆ.

2024ರ ಸೆಪ್ಟೆಂಬರ್‌ನಲ್ಲಿ ಮದುವೆಯ ಸಲುವಾಗಿ ಮಂಗಳೂರಿಗೆ ಬಂದಿದ್ದು, ಅಲ್ಲಿಗೆ ಕರೆಸಿದ ಬಶೀರ್, ಸಫಿಯಾ ಮತ್ತು ಇತರ ಆರೋಪಿತರು ಅವರನ್ನು ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು, ನಂತರ ಅವುಗಳನ್ನು ಲೀಕ್ ಮಾಡುವುದಾಗಿ ಬೆದರಿಸಿ 44.80 ಲಕ್ಷ ರೂಪಾಯಿ ಹಣ ವಂಚಿಸಿದ್ದಾರೆ. ಎಂದು ಪಿರಿಯಾದಿದಾರರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 145/2025 ಕಲಂ: 318(4), 308(2), 115(2), 351(2), r/w 3(5) BNS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

You may have missed

error: Content is protected !!