December 16, 2025

ಅಶೋಕ‌ ಜನಮನ‌ 2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

0
image_editor_output_image31163866-1760363750127

ಪುತ್ತೂರು: ಅ.20  ರಂದು ಶಾಸಕ ಅಶೋಕ್ ರೈ ಅವರ ರೈ ಎಸ್ಟೇಟ್ಸ್ ಎಜುಜೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ನಡೆಯುವ ಅಶೋಕ ಜನಮನ-2025 ವಸ್ತ್ರ ವಿತರಣೆ ಕಾರ್ಯಕ್ರಮ ಮತ್ತು ಈ ಕಾರ್ಯಕ್ರಮಕ್ಕೆ ಕರ್ನಾಟಕದ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ರವರು ಭಾಗವಹಿಸಲಿದ್ದು, ಕಾರ್ಯಕ್ರಮ ಯಶಸ್ವಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಶೇಷ ಪ್ರಾರ್ಥನೆ ನಡೆಯಿತು.

ಈ ಕಾರ್ಯಕ್ರಮದ ಯಾವುದೇ ವಿಘ್ನಗಳು ಇಲ್ಲದೇ ಬಹಳ ಯಶಸ್ವಿಯಾಗಿ ನಡೆಯಬೇಕು ಎಂಬ ಉದ್ದೇಶದಿಂದ ದೇವರಲ್ಲಿ ಪ್ರಾರ್ಥನೆ ಸಲ್ಲಿಸುವ ಸಲುವಾಗಿ ಸರ್ವ ಧರ್ಮದ ಧಾರ್ಮಿಕ ಕೇಂದ್ರ ಗಳಲ್ಲಿ ಪ್ರಾರ್ಥನೆ ಯನ್ನುಮಾಡುವುದಾಗಿ ತಿರ್ಮಾನಿಸಲಾಗಿದೆ.

ಶಾಸಕ ಅಶೋಕ್ ರೈ ನೇತೃತ್ವದಲ್ಲಿ‌ನಡೆಯುವ ಅಶೋಕ ಜನಮನ ಕಾರ್ಯಕ್ರಮ ಯಶಸ್ವಿಗಾಗಿ ಶ್ರೀ ಮಹಾಲಿಂಗೇಶ್ವರ ದೇವರಲ್ಲಿ ಪಕ್ಷದ ವತಿಯಿಂದ ವಿಶೇಷ ಪ್ರಾರ್ಥನೆ ನಡೆದಿದೆ. ಎಲ್ಲವೂ ನಿರ್ವಿಘ್ನವಾಗಿ ನಡೆದು ಕಾರ್ಯಕ್ರಮ ಯಶಸ್ವಿಯಾಗಲಿಎಂದು ದೇವರಲ್ಲಿ ಬೇಡಿಕೊಳ್ಳಲಾಗಿದೆ. ಎಲ್ಲಾ ಧರ್ಮದ ಧಾರ್ಮಿಕ ಕೇಂದ್ರಕ್ಕೆ ತೆರಳಿ ಪಕ್ಷದ ವತಿಯಿಂದ ವಿಶೇಷ ಪ್ರಾರ್ಥನೆ ನಡೆಯಲಿದೆ.

ಕೃಷ್ಣಪ್ರಸಾದ್ ಆಳ್ವ, ಅಧ್ಯಕ್ಷರು ಬ್ಲಾಕ್ ಕಾಂಗ್ರೆಸ್ ಪುತ್ತೂರು, ಈ ವೇಳೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರಭಟ್, ಪುಡಾ ಸದಸ್ಯ ನಿಹಾಲ್ ಪಿ ಶೆಟ್ಟಿ,ಮಹಾಬಲ ರೈ, ಸಂತೋಷ್ ಭಂಡಾರಿ,ಸುಸರ್ಶನ್, ಗಿರೀಶ್ ರೈ ಸಂಟ್ಯಾರ್, ದಾಮೋದರ್ ಮುರ, ರೂಪರೇಖಾ ಆಳ್ವ, ಹರಿಣಾಕ್ಷೆ, ಜಯಂತ ಕೆಂಗುಡೇಲು, ಪೂರ್ಣೇಶ್ ಭಂಡಾರಿ, ರಂಜಿತ್ ಬಂಗೇರ, ರೋಶನ್ ರೈ ಬನ್ನೂರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!