ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಬೋಳಂತೂರು ನಿವಾಸಿ ಜಬ್ಬಾರ್ ಮೃತ್ಯು
ಬಂಟ್ವಾಳ: ಆಟೋ ಎಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಬಿಸಿರೋಡು ಕಡೂರು ರಾಷ್ಟ್ರೀಯ ಹೆದ್ದಾರಿಯ ಗಾಣದಪಡ್ಪು ಎಂಬಲ್ಲಿ ನಡೆದಿದೆ.
ಬೋಳಂತೂರು ನಿವಾಸಿ ಜಬ್ಬಾರ್ ( 33) ಎಂದು ಗುರುತಿಸಲಾಗಿದೆ.
ಅವಿವಾಹಿತನಾಗಿರುವ ಜಬ್ಬಾರ್ ಅವರು ಗಾಣದಪಡ್ಪು ಶಿವಗಣೇಶ್ ಬ್ಯಾಟರಿ ಅಂಗಡಿಯ ಕಾರ್ಮಿಕನಾಗಿದ್ದ, ಆಟೋ ಇಲೆಕ್ಟ್ರಿಕಲ್ ಉದ್ಯೋಗಿಯಾಗಿದ್ದ.
ಇಂದು ಬೆಳಿಗ್ಗೆ ಗಾಣದಪಡ್ಪು ಹೆದ್ದಾರಿಯ ಬದಿಯಲ್ಲಿ ಕಾರೊಂದಕ್ಕೆ ಹಾರ್ನ್ ಅಳವಡಿಸುತ್ತಿದ್ದ ವೇಳೆ ವೇಣೂರು ಮೂಲದ ವ್ಯಕ್ತಿಯೋರ್ವ ಬಂಟ್ವಾಳ ಬೈಪಾಸ್ ಕಡೆಯಿಂದ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಜಬ್ಬಾರ್ ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ
ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ನೀಡಿದ್ದಾರೆ.




