August 12, 2026

ಉಡುಪಿಯ RTO ಅಧಿಕಾರಿ ಲಕ್ಷ್ಮೀನಾರಾಯಣ ಮನೆಗೆ ಲೋಕಾಯುಕ್ತ ಪೊಲೀಸರ ದಾಳಿ

0
image_editor_output_image298721609-1760448749719.jpg

ಉಡುಪಿ: ಉಡುಪಿಯ ಆರ್ ಟಿ ಓ ಅಧಿಕಾರಿ ಲಕ್ಷ್ಮೀನಾರಾಯಣ ಪಿ. ನಾಯಕ್ ಅವರ ಮನೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದೆ.

ಆ‌ರ್.ಟಿ.ಒ. ಲಕ್ಷ್ಮೀ ನಾರಾಯಣ ಪಿ. ನಾಯಕ್ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆ ಕುಮಟಾದ ನಿವಾಸಿ ಆಗಿರುತ್ತಾರೆ. ಲೋಕಾಯುಕ್ತ ಅಧಿಕಾರಿಗಳು ಆ‌ರ್.ಟಿ.ಒ. ಅವರ ಉಡುಪಿಯ ಕಿನ್ನಿಮುಲ್ಕಿಯ ಅಪಾರ್ಟ್ ಮೆಂಟ್ ನಲ್ಲಿ ಇರುವ ಮನೆಯಲ್ಲಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.

ಇದೇ ವೇಳೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಹಾಗೂ ಉಡುಪಿಯ ಪಡುಅಲೆವೂರು ನಲ್ಲಿರುವ ಸಂಬಂಧಿಕರ ಮನೆಗಳಲ್ಲೂ ಸರ್ಚ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!