March 20, 2026

ಸುಳ್ಯ: 35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

0
image_editor_output_image611757661-1760508518955.jpg

ಸುಳ್ಯ: 35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿ ಕೇರಳದ ತ್ರಿಸ್ಸೂರ್‌ ಜಿಲ್ಲೆಯ ನಾಟಿ ಮನೆಯ ಬಾಲನ್(73) ಎಂದು ಗುರುತಿಸಲಾಗಿದೆ.

1990 ನೇ ವರ್ಷದಲ್ಲಿ ಸುಳ್ಯ ತಾಲ್ಲೂಕಿನ ಅಲೆಟ್ಟಿ ಗ್ರಾಮದ ನಾಗಪಟ್ಟಣ ಎಂಬಲ್ಲಿ ಅಕ್ರಮ ಕೂಟ ಸೇರಿ ಶಾಂತಪ್ಪ ಮತ್ತು ಸುಬ್ಬಯ್ಯ ರವರಿಗೆ ತಲ್ವಾರ್ ನಿಂದ ಕಡಿದು ತೀವ್ರ ಸ್ವರೂಪದ ರಕ್ತ ಗಾಯ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್‌ ರಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿ ಸುಮಾರು 35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದು, ಈತನನ್ನು ಕೇರಳ ರಾಜ್ಯದ ತ್ರಿಸ್ಸೂರ್ ನಿಂದ ದಸ್ತಗಿರಿ ಮಾಡಿ ಅ.೧೩ ರಂದು ದಸ್ತಗಿರಿ ಮಾಡಿ ಸುಳ್ಯದ JMFC ನ್ಯಾಯಾಲಯದ ನ್ಯಾಯಧೀಶರು ಮುಂದೆ ಹಾಜರು ಪಡಿಸಿದ್ದು ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!