ಬಂಟ್ವಾಳ: ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಮೃತ್ಯು
ಬಂಟ್ವಾಳ: ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.
ಬಂಟ್ವಾಳ ಹೊಸ್ಮಾರು ನಿವಾಸಿ ಗೋಪಾಲ ಎಂಬವರ ಪುತ್ರ ಧನುಷ್ (23) ಮೃತಪಟ್ಟ ಯುವಕನಾಗಿದ್ದಾನೆ.
ಸರ್ವೆ ಇಲಾಖೆಯ ಗುತ್ತಿಗೆ ಆಧಾರದ ಉದ್ಯೋಗಿಯಾಗಿರುವ ಈತ ಮಂಗಳೂರು ಕಡೆಯಿಂದ ಬಂಟ್ವಾಳ ಹೊಸ್ಮಾರು ಮನೆಗೆ ಸಂಜೆ ಮರಳುವ ವೇಳೆ ತುಂಬೆ ಸಮೀಪ ರಾಮಲಕಟ್ಟೆ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಧನುಷ್ ನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಗ್ಗೆ ಪೋಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.




