ಸುರತ್ಕಲ್: ಅಂಗಡಿಗೆ ಹೋಗುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿ ದಾಳಿ
ಸುರತ್ಕಲ್: ಬೀದಿ ನಾಯಿಯೊಂದು ಬಾಲಕಿ ಮೇಲೆ ದಾಳಿ ನಡೆಸಿದ ಪರಿಣಾಮ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಸಂಜೆ ಕಾನ ಮೈದಗುರಿಯಲ್ಲಿ ನಡೆದಿದೆ.
ಸುರತ್ಕಲ್ ಕಾನ ಮೈಂದಗುರಿ ನಿವಾಸಿ ಹೈದರ್ ಅಲಿ ಅವರ ಮಗಳು ರಿದಾ ಫಾತಿಮ (9) ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ತಿಳಿದು ಬಂದಿದೆ.
ರಿದಾ ಫಾತಿಮ ಸಂಜೆಯ ವೇಳೆ ಮನೆ ಬಳಿಯ ಅಂಗಡಿಗೆ ಹೋಗುತ್ತಿದ್ದಳು. ಈ ವೇಳೆ ಎಲ್ಲಿಂದಲೋ ಜಗಳ ಮಾಡಿಕೊಂಡು ಬೀದಿನಾಯಿಗಳು ಅಲ್ಲಿಗೆ ಬಂದಿವೆ. ನಾಯಿಗಳ ಜಗಳ ಕಂಡು ಬೆಚ್ಚಿಬಿದ್ದ ಬಾಲಕಿ ಮನೆಗೆ ಹಿಂದಿರುಗಿ ಓಡುವ ಭರದಲ್ಲಿ ಕೈಯ್ಯಲ್ಲಿದ್ದ ಹಣ ಕೆಳಗೆ ಬಿದ್ದಿದೆ. ಅದನ್ನು ಹೆಕ್ಕುವಷ್ಟರಲ್ಲಿ ನಾಯಿಗಳ ಹಿಂಡು ಬಾಲಕಿಯ ಮೇಲೆ ದಾಳಿ ಮಾಡಿವೆ. ದಾಳಿಯಿಂದ ಬಾಲಕಿಯ ಕೈ, ಕಾಲಿಗೆ ಕಚ್ಚಿದ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.




