ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ಸುಮಾರು ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಾವೂರು ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾವೂರು ಜ್ಯೋತಿ ನಗರ ನಿವಾಸಿ ಧರ್ಮರಾಜ (60) ಬಂಧಿತ ಆರೋಪಿ. 2018ರಲ್ಲಿ ಕಾವೂರು ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದ ಧರ್ಮರಾಜ್ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯ ಈತನ ವಿರುದ್ಧ ಎಲ್ ಪಿಸಿ ವಾರಂಟ್ ಹೊರಡಿಸಿತ್ತು.
ಖಚಿತ ಮಾಹಿತಿ ಮೇರೆಗೆ ಕಾವೂರು ಠಾಣೆಯ ಎಎಸ್ಐ ಚಂದ್ರಹಾಸ್ ಸನಿಲ್ ಮತ್ತು ಎಚ್ ಸಿ ಬಾಲಕೃಷ್ಣ ಮತ್ತು ಪಿಸಿ ಚಂದ್ರಶೇಖರಪ್ಪ ಅವರು ಆರೋಪಿಯನ್ನು ಮೂಲ್ಕಿ ಪಕ್ಷಿಕೆರೆ ಕೆಮ್ರಾಲ್ ಬಳಿ ಬಂಧಿಸಿದ್ದಾರೆ.
ಆರೋಪಿಯನ್ನು 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಧೀಶರು ಅ.29ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.





