February 2, 2026

ಮಡಿಕೇರಿ: ಬಿಬಿಎ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

0
image_editor_output_image796353818-1760787634522.jpg

ಬೆಂಗಳೂರು: ಬಿಬಿಎ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲೂರಿನ ಖಾಸಗಿ ಕಾಲೇಜಿನ ಪಿಜಿಯಲ್ಲಿ ನಡೆದಿದೆ.

ಸನಾ ಪರ್ವಿನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬಾಗಲೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದಳು. ಕಾಲೇಜಿನ ಪಿಜಿಯಲ್ಲಿ ನೇಣಿಗೆ ಶರಣಾಗಿದ್ದಾಳೆ.

ಸಹ ವಿದ್ಯಾರ್ಥಿ ಪ್ರೀತಿಸುವಂತೆ ಈಕೆಗೆ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಅದೇ ಕಾಲೇಜಿನಲ್ಲಿ ಓದುತ್ತಿದ್ದ ಸೀನಿಯರ್ ವಿದ್ಯಾರ್ಥಿಯಿಂದ ಕಿರುಕುಳ ಇತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಸನಾ ಪರ್ವಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಆರೋಪ ಕೇಳಿಬಂದಿದೆ. ಈ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಸನಾ ಪರ್ವಿನ್‌ ಮಡಿಕೇರಿ ಮೂಲದ ಯುವತಿ. ಈಕೆಗೆ ಕೇರಳದ ಮೂಲದ ಯುವಕ, ಪಿಜಿ ಮತ್ತು ಕಾಲೇಜು ಬಳಿ ಬಂದು ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ. ಅಸಭ್ಯವಾಗಿ ಮೆಸೇಜ್‌ ಮಾಡುತ್ತಿದ್ದ. ಕಳೆದ 10 ತಿಂಗಳಿಂದ ಆಕೆಗೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.

Leave a Reply

Your email address will not be published. Required fields are marked *

error: Content is protected !!