ಮಂಗಳೂರು: ವಿಡಿಯೋ ಬಳಸಿ ಬ್ಲಾಕ್‌ಮೇಲ್: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ
ಮಂಗಳೂರು: ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಯುವಕನೊಬ್ಬ, ತನ್ನ ಖಾಸಗಿ ವಿಡಿಯೋ ಬಳಸಿ ನಾಲ್ವರು ತನಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಮೃತ ಯುವಕನನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯ ಪರಪ್ಪಾಡಿ ನಿವಾಸಿ ಅಭಿಷೇಕ್ ಎಂದು ಗುರುತಿಸಲಾಗಿದೆ.
ಡೆತ್ ನೋಟ್ ನಲ್ಲಿ ತಾನು ಪ್ರೀತಿಸಿದ ಹು ಆಕೆ ತಂಡದಲ್ಲಿದ್ದ ಮಂಗಳೂರು ಮೂಲದ ರಾಕೇಶ್ ರಾಹುಲ್ ಹಾಗೂ ತಸ್ಲಿಮ್ ಸಾವಿಗೆ ಕಾರಣ ಎಂದು ಬರೆದಿದ್ದಾನೆ. ಅವರು ಹಣಕ್ಕಾಗಿ ತೀವ್ರ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ ಮತ್ತು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾನೆ. ಅಲ್ಲದೆ ಇವರು ತಂಡವಾಗಿ ಅನೇಕ ಜನರನ್ನು ಅಶ್ಲೀಲ ಫೋಟೋ ಬಳಸಿ ವಂಚಿಸಿದ್ದಾರೆ ಅಂತಲೂ ದೂರಿದ್ದಾನೆ.




