ಪತಿ ಮನೆಯವರ ಕಿರಿಕುಳ: ಡ್ಯಾಂಗೆ ಹಾರಿ ಉಪನ್ಯಾಸಕಿ ಆತ್ಮಹತ್ಯೆ
ದೇವನಹಳ್ಳಿ: ಪತಿ ಮನೆಯವರ ಕಿರುಕುಳದಿಂದ ಬೇಸತ್ತ ಉಪನ್ಯಾಸಕಿ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ವಿಶ್ವೇಶ್ವರಯ್ಯ ಪಿಕಪ್ ಡ್ಯಾಮ್ನಲ್ಲಿ ನಡೆದಿದೆ.
ಪುಷ್ಪಾವತಿ (30) ಮೃತರಾಗಿದ್ದು, 11 ತಿಂಗಳ ಹಿಂದೆ ತಪಸ್ಸಿಹಳ್ಳಿಯ ವೇಣು ಎಂಬವರ ಜತೆ ಇವರ ವಿವಾಹವಾಗಿತ್ತು. ಮದುವೆ ನಂತರ ಪತಿ ಮನೆಯಲ್ಲಿ ಪುಷ್ಪಾವತಿಗೆ ನಿರಂತರ ಕಿರುಕುಳ ನೀಡಲಾಗುತ್ತಿತ್ತು. ವರದಕ್ಷಿಣೆ, ನಿವೇಶನ ಕೊಡಿಸುವಂತೆ ಪೀಡಿಸುತ್ತಿದ್ದರು ಎಂದು ಪುಷ್ಪಾವತಿ ಆರೋಪಿಸಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪುಷ್ಪಾವತಿ ನಾಪತ್ತೆ ಆಗಿರುವ ಬಗ್ಗೆ ದೊಡ್ಡಬಳ್ಳಾಪುರ ಮಹಿಳಾ ಠಾಣೆಯಲ್ಲಿ ಕುಟುಂಬಸ್ಥರು ಕೇಸ್ ದಾಖಲಿಸಿದ್ದರು.




