ಉಳ್ಳಾಲ: ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಮಲತಂದೆಯ ಬಂಧನ
ಉಳ್ಳಾಲ: ಬಾಲಕಿಯ ಮೇಲೆ ಮಲ ತಂದೆಯೇ ಅತ್ಯಾಚಾರಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲ ಬೈಪಾಸ್ ನಲ್ಲಿ ನಡೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಮೀರ್ ಎಂಬಾತನನ್ನು ಪೊಲೀಸರು ರವಿವಾರ ಬಂಧಿಸಿದ್ದಾರೆ. ಸಂತ್ರಸ್ತೆಯ ತಂದೆ ಮೃತಪಟ್ಟ ಬಳಿಕ ಆಕೆಯ ತಾಯಿ ಅಮೀರ್ ಎಂಬಾತನ ಜೊತೆ ವಿವಾಹವಾಗಿ ಕುಂಪಲದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು.
ಈ ಮಧ್ಯೆ ತಾಯಿ ಹಾಗೂ ಅಪ್ರಾಪ್ತ ಮಲಗಿದ್ದ ಸಂದರ್ಭದಲ್ಲಿ ಆರೋಪಿ ಅಮೀರ್ ಅಪ್ರಾಪ್ತ ಮೇಲೆ ಅತ್ಯಾಚಾರ ಎಸಗಿದ್ದ. ಈ ಸಂದರ್ಭ ಅಪ್ರಾಪ್ತ ಕಿರುಚಾಡಿದಾಗ ಆಕೆಯ ಬಾಯಿಗೆ ತಲೆದಿಂಬು ಇಟ್ಟು ಬಾಯಿ ಮುಚ್ಚಿಸಿದ್ದ ಎಂದು ಆರೋಪಿಸಲಾಗಿದೆ.




