February 2, 2026

ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ “ಅಶೋಕ ಜನಮನ” ಕಾರ್ಯಕ್ರಮದಲ್ಲಿ ನೂಕು ನುಗ್ಗಲು: 11ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು

0
image_editor_output_image1148705110-1760961785687.jpg

ಪುತ್ತೂರು, ಅಕ್ಟೋಬರ್ 20 :ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ‘ಅಶೋಕ ಜನಮನ -2025’ ನಡೆದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿದೆ.

ಕ್ರೀಡಾಂಗಣದ ಸಾಮರ್ಥ್ಯಕ್ಕಿಂದ ಹೆಚ್ಚು ಜನ ಭಾಗಿಯಾಗಿದ್ದರಿಂದ ನೂಕುನುಗ್ಗಲು ಉಂಟಾಗಿ ಆಮ್ಲಜನಕ ಕೊರತೆಯಿಂದ ಜನ ಅಸ್ವಸ್ಥರಾಗಿದ್ದಾರೆ.

ಮಳೆ ಬಂದು ಕೆಸರು ತುಂಬಿದ್ದ ಮೈದಾನದ ಅವ್ಯವಸ್ಥೆ ಸಣ್ಣ ಸಣ್ಣ ಮಕ್ಕಳನ್ನು ಹಿಡಿದುಕೊಂಡು ಬಂದಿದ್ದ ಜನ ಪರದಾಡುವಂತಾಗಿದೆ . ಅಸ್ವಸ್ಥರಾದವರಿಗೆ ತಕ್ಷಣವೇ ಸಂಘಟಕರು ಪ್ರಥಮ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿದ್ದು, ಪುತ್ತೂರು ತಾಲೂಕು ಸರ್ಕಾರಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ:

ದಿನಾಂಕ 20-10-2025 ರಂದು ಪುತ್ತೂರಿನ ಕೊಂಬೆಟ್ಟು ಮೈದಾನದಲ್ಲಿ ನಡೆದ ಜನಮನ ಕಾರ್ಯಕ್ರಮದಲ್ಲಿ ಅಲ್ಲಿ ಸೇರಿದ್ದ ಜನರಿಗೆ ದೇಹ ನಿರ್ಜಲೀಕರಣಗೊಂಡ ಕಾರಣ ಕೆಲವು ಜನರು ಅಸ್ವಸ್ಥಗೊಂಡಿದ್ದು ಅವರನ್ನು ಅದೇ ಸ್ಥಳದಲ್ಲಿ ಚಿಕಿತ್ಸೆಗೆ ಒಳಪಡಿಸಿದ ನಂತರ ಗುಣಮುಖರಾಗಿ ಮನೆಗೆ ತೆರಳಿರುತ್ತಾರೆ. ಆಸ್ಪತ್ರೆಯಲ್ಲಿ 13 ಜನ ಹೊರರೋಗಿಯಾಗಿ ಚಿಕಿತ್ಸೆಗೆ ಒಳಪಟ್ಟಿರುತ್ತಾರೆ ಪ್ರಸ್ತುತ ಎಲ್ಲಾರೂ ಚೇತರಿಸಿಕೊಂಡಿರುತ್ತಾರೆ ಯಾರಿಗೂ ಯಾವುದೇ ರೀತಿಯ ತೀವ್ರತರ ತೊಂದರೆಗಳು ಉಂಟಾಗಿರುವುದಿಲ್ಲ.

ಈ ಬಗ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರಿಂದ ವೀಡಿಯೊ ಹೇಳಿಕೆ ಪಡೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!