ಮನೆ ನಿರ್ಮಿಸಲು ಮಾಡಿದ್ದ ಸಾಲ ತೀರಿಸಲಾಗದೆ ಯೋಧ ಆತ್ಮಹತ್ಯೆ
ಮೈಸೂರು: ಆತ 15 ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರ ಆಗ್ರಾ ಚೀನಾ ಗಡಿ ಕಾಯುತ್ತಿದ್ದ ಯೋಧ. ಆದರೆ, ಮನೆ ನಿರ್ಮಿಸಲು ಮಾಡಿದ್ದ ಸಾಲ ತೀರಿಸಲಾಗದೆ ನೇಣಿಗೆ ಶರಣಾಗಿದ್ದಾರೆ.
ಈ ಘಟನೆ ನಡೆದಿರೋದು ಮೈಸೂರು ಜಿಲ್ಲೆಯ ಹುಣಸೂರು ನಗರದ ಹೊಸ ಬಡಾವಣೆಯಲ್ಲಿ.
ನಂಜಾಪುರದ ನಿವಾಸಿ, 35 ವರ್ಷದ ಎಂ.ಚಂದ್ರಶೇಖರ್ ಆ*ತ್ಮಹ*ತ್ಯೆ ಮಾಡಿಕೊಂಡ ಯೋಧ. ಚಂದ್ರಶೇಖರ್ ಹೊಸ ಬಡಾವಣೆಯಲ್ಲಿ ಎರಡು ವರ್ಷಗಳ ಹಿಂದೆ ಹೊಸದಾಗಿ ಮನೆ ನಿರ್ಮಿಸಿದ್ದರು. ಆ ವೇಳೆ ಬ್ಯಾಂಕ್ ಹಾಗೂ ಸ್ನೇಹಿತರ ಬಳಿ ಸಾಲ ಪಡೆದಿದ್ದರು ಎನ್ನಲಾಗಿದೆ. ಸಾಲ ತೀರಿಸಲಾಗದೆ ಪರದಾಡುತ್ತಿದ್ದರು.




