February 2, 2026

ಮಗಳ ಜೊತೆ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ತಾಯಿ

0
image_editor_output_image-1117425432-1761027864641.jpg

ಹಾವೇರಿ: ಪತಿ ಕುಟುಂಬ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು, ಮಹಿಳೆ ತನ್ನ ಮಗಳ ಜೊತೆ ವರಾದ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ತಾಲೂಕಿನ ವರದಾಹಳ್ಳಿ ಗ್ರಾಮದ ಬಳಿ ನಡೆದಿದೆ.

ಸವಿತಾ ನಾಗರಾಜ್ ಉಳ್ಳಾಗಡ್ಡಿ (38) ಹಾಗೂ ಕಾವ್ಯಾ (12) ಆತ್ಮಹತ್ಯೆಗೆ ಶರಣಾದ ತಾಯಿ, ಮಗಳು. ಗಂಡನ ಮನೆಯಲ್ಲಿ ದಿನನಿತ್ಯ ಭಿನ್ನಾಭಿಪ್ರಾಯ ಹಾಗೂ ಕಲಹಗಳು ನಡೆಯುತ್ತಿದ್ದವು.

ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಭಾನುವಾರ (ಅ.19) ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!