February 2, 2026

ಪುತ್ತೂರು: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು:

0
image_editor_output_image-540641859-1761108116253

ಪುತ್ತೂರು: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರು ಪತ್ತೆ ಹಚ್ಚಿ ನಿಲ್ಲಿಸಲು ಹೇಳಿದಾಗ ಆರೋಪಿ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದಾಗ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಪುತ್ತೂರು ಸಮೀಪ ನಡೆದಿದೆ.

ಇಲ್ಲಿಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಅಬ್ದುಲ್ಲಾ (40 ವರ್ಷ), ಐಚರ್ ವಾಹನದಲ್ಲಿ 10 ಜಾನುವಾರಗಳನ್ನು  ಸಾಗಿಸುತ್ತಿದ್ದನು ಆತನೇ ಚಾಲಕನಾಗಿದ್ದು, ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸದೆ ಇದ್ದು  ಪೊಲೀಸ್‌ರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದರು, ಆರೋಪಿಯು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುತ್ತಾನೆ.

ಆಗ ಪಿಎಸ್ಐ  ರವರು ಎರಡು ಸುತ್ತು ಗುಂಡುಗಳನ್ನು ಫೈಯರ್ ಮಾಡಿದ್ದಾರೆ  ಒಂದನ್ನು ಐಚರ್ ವಾಹನದ ಮೇಲೆ ಹಾಗೂ ಮತ್ತೊಂದು ಆರೋಪಿಯ ಕಾಲಿಗೆ ಬಿದ್ದಿರುತ್ತದೆ.

ಘಟನೆಯ ಸಮಯದಲ್ಲಿ ಇನ್ನೊಬ್ಬ ಆರೋಪಿಯು ಸ್ಥಳದಿಂದ ಪರಾರಿ ಯಾಗಿದ್ದಾನೆ. ಆರೋಪಿ ಅಬ್ದುಲ್ಲ ಮೂಲತ ಕೇರಳದ ಕಾಸರಗೋಡಿನವನು. ರೋಪಿಯನ್ನು ಚಿಕಿತ್ಸೆಯ ಬಗ್ಗೆ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿದೆ.


ಈತನ ಮೇಲೆ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 33/2025 ಗೋ ಹತ್ಯೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!