ಮಂಗಳೂರು: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ಅಬಕಾರಿ ಇಲಾಖೆಯ ಪ್ರಕರಣವೊಂದರಲ್ಲಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಸೆನ್ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಕಾಸರಗೋಡಿನ ನಿವಾಸಿ ಕೆ. ಚಂದ್ರ ಶೇಖರನ್ (54 ವರ್ಷ) ಬಂಧಿತ ಆರೋಪಿಯಾಗಿದ್ದಾನೆ. ಅಬಕಾರಿ ಜ್ಯಾರಿ ಮತ್ತು ಲಾಟರಿ ನಿಷೇಧ ದಳದ ಪೊಲೀಸರು 2014 ರಲ್ಲಿ ದಾಖಲಿಸಿದ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 12 ವರುಷಗಳಿಂದ ಈತ ತಲೆಮೆರಸಿಕೊಂಡಿದ್ದನು.
ಈತನ ವಿರುದ್ಧದ ಪ್ರಕರಣವನ್ನು ಲಾಂಗ್ ಪೆಂಡಿಂಗ್ ಕೇಸ್ ಎಂಬುದಾಗಿ ಪರಿಗಣಿಸಲಾಗಿತ್ತು. ಇದೀಗ ಖಚಿತ ಮಾಹಿತಿ ಮೇರೆಗೆ ಸೆನ್ ಪೊಲೀಸರು ಆರೋಪಿನ ಕೆ. ಚಂದ್ರ ಶೇಖರನ್ ನನ್ನು ಕಾಸರಗೋಡಿನ ನುಳ್ಳಿಪ್ಪಾಡಿ ಎಂಬಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ.




