ಪಿಜಿಯೊಂದರಲ್ಲಿ ತಿಗಣೆ ಔಷಧಿ ವಾಸನೆಗೆ ಬಿಟೆಕ್ ವಿದ್ಯಾರ್ಥಿ ಸಾವು
ಬೆಂಗಳೂರು: ಹೆಚ್‌ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪಿಜಿಯೊಂದರಲ್ಲಿ ತಿಗಣೆ ಔಷಧಿ ವಾಸನೆಗೆ ಬಿಟೆಕ್ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.
ಮೃತನನ್ನು ತಿರುಪತಿ ಮೂಲದ ಪವನ್ ಎಂದು ಗುರುತಿಸಲಾಗಿದೆ. ಆತ ಒಂದು ವಾರದ ಹಿಂದೆ ಊರಿಗೆ ಹೋಗಿದ್ದ. ಈ ಸಮಯದಲ್ಲಿ ತಿಗಣೆ ಔಷಧ ಸಿಂಪಡಿಸಿ ರೂಮ್ ಬಂದ್ ಮಾಡಲಾಗಿತ್ತು. ಈ ಬಗ್ಗೆ ಮಾಹಿತಿ ಇಲ್ಲದೇ ಪವನ್ ರೂಮ್‌ಗೆ ಪ್ರವೇಶಿಸಿ ಮಲಗಿದ್ದ.
ಬೆಳಗ್ಗೆ ವೇಳೆಗೆ ಆತ ಅಸ್ವಸ್ಥನಾಗಿದ್ದ. ಪರಿಶೀಲಿಸಿದಾಗ ಆತ ಮೃತಪಟ್ಟಿರುವುದು ಗೊತ್ತಾಗಿದೆ. ಯುವಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ.




