February 1, 2026

ಸುರತ್ಕಲ್ ಚೂರಿ ಇರಿತ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

0
image_editor_output_image752029190-1761371230744.jpg

ಮಂಗಳೂರು: ಸುರತ್ಕಲ್ ನ ದೀಪಕ್ ಬಾರ್ ಸಮೀಪ ನಡೆದ ಚೂರಿ ಇರಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.ಮಂಗಳೂರು ಆಕರ್ಷಣೆಗಳು

ಬಂಧಿತರನ್ನು ಸುಶಾಂತ್ @ ಕಡವಿ(29), ಕೆ ವಿ ಅಲೆಕ್ಸ್(27), ನಿತಿನ್(26), ಮತ್ತು ಆರೋಪಿಗಳಿಗೆ ಆಶ್ರಯ ಕೊಟ್ಟ ವ್ಯಕ್ತಿ ಆರುಣ್ ಶೆಟ್ಟಿ(56) ಎಂದು ಗುರುತಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಗುರುರಾಜ್ ಆಚಾರಿ ಹಾಗೂ ಆರೋಪಿಗಳಿಗೆ ಅರುಣ್ ಶೆಟ್ಟಿಯೊಂದಿಗೆ ಅಶ್ರಯ ನೀಡಿದ ಅಶೋಕ್ ಎಂಬಾತನು ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆಸಿದ್ದಾರೆ. ಗುರುವಾರ ರಾತ್ರಿ 10-30ರ ಸುಮಾರಿಗೆ ಸುರತ್ಕಲ್ ಕಾನಾ ಬಳಿಯ ದೀಪಕ್ ಭಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರಿಬ್ಬರಿಗೆ ನಾಲ್ವರ ತಂಡ ಚೂರಿ ಇರಿದಿತ್ತು. ಈ ಪ್ರಕರಣದ ಕುರಿತಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸದ್ರಿ ಪ್ರಕರಣದ ಆರೋಪಿತರ ಪತ್ತೆಯ ಬಗ್ಗೆ ಶ್ರೀ ರವಿಶಂಕರ್, ಮಾನ್ಯ ಉಪ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ) ರವರ ನಿರ್ದೇಶನದಂತೆ, ಮಾನ್ಯ ಸಹಾಯಕ ಪೊಲೀಸ್ ಆಯುಕ್ತರು (ಉತ್ತರ ಉಪ ವಿಭಾಗ) ಶ್ರೀ ಶ್ರೀಕಾಂತ್ ಕೆ ರವರ ಮಾರ್ಗದರ್ಶನದಲ್ಲಿ, ಸುರತ್ಕಲ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ಪ್ರಮೋದ್ ಕುಮಾರ್ ಪಿ ರವರ ನೇತೃತ್ವದಲ್ಲಿ ಪಿಎಸ್ಐ ಗಳಾದ ರಾಘವೇಂದ್ರ ನಾಯ್ಕ್, ಜನಾರ್ಧನ ನಾಯ್ಕ್, ಶಶಿಧರ ಶೆಟ್ಟಿ, ಎಎಸ್.ಐ ರವರಾದ ರಾಜೇಶ್ ಆಳ್ವ, ತಾರನಾಥ, ರಾಧಾಕೃಷ್ಣ, ಹಾಗೂ ಸಿಬ್ಬಂದಿಯವರಾದ ಅಣ್ಣಪ್ಪ, ಉಮೇಶ್ ಕುಮಾರ್, ತಿರುಪತಿ, ಅಜಿತ್ ಮ್ಯಾಥ್ಯೂ, ರಾಮು ಕೆ, ಕಾರ್ತೀಕ್, ವಿನೋದ್ ರವರು ಹಾಗೂ ಸಿಸಿಬಿ ಘಟಕದ ಅಧಿಕಾರಿ/ಸಿಬ್ಬಂದಿಯವರು ಹಾಗೂ ಎಸ್ ಎ ಎಫ್ ತಂಡದವರು ಮತ್ತು ಶ್ವಾನ ದಳದವರು ಆರೋಪಿಗಳ ಪತ್ತೆಯ ಬಗ್ಗೆ ಹಾಗೂ ತನಿಖೆಯ ಬಗ್ಗೆ ಭಾಗವಹಿಸಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!