ಸುಬ್ರಹ್ಮಣ್ ರೋಡ್ ಘಾಟ್ ಸೆಕ್ಷನ್‌ನಲ್ಲಿ ರೈಲ್ವೇ ಕಾಮಗಾರಿ: ಬೆಂಗಳೂರು-ಮಂಗಳೂರು ನಡುವಿನ ರೈಲು ಸೇವೆಯಲ್ಲಿ ವ್ಯತ್ಯಯ
ಮಂಗಳೂರು: ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ನಡುವೆ ನಡೆಯುತ್ತಿರುವ ರೈಲ್ವೆ ವಿದ್ಯುದ್ದೀಕರಣ ಕಾರ್ಯದಿಂದಾಗಿ, ಮಂಗಳೂರು ಬೆಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳ ಸಮಯದಲ್ಲಿ ವ್ಯತ್ಯವಾಗಲಿದ್ದು. ಕೆಲವು ರೈಲುಗಳ ರದ್ದು ಮಾಡಲಾಗಿದೆ.
ಸಕಲೇಶಪುರ ಹಾಗೂ ಸುಬ್ರಹ್ಮಣ್ ರೋಡ್ ಘಾಟ್ ಸೆಕ್ಷನ್‌ನಲ್ಲಿ ರೈಲ್ವೇ ಕಾಮಗಾರಿ ಆರಂಭಗೊಳ್ಳುತ್ತಿದೆ. ಈ ಭಾಗದಲ್ಲಿ ರೈಲ್ವೇ ವಿದ್ಯುದ್ದೀಕರಣ ಕಾಮಗಾರಿ ನವೆಂಬರ್ 2 ರಿಂದ ಆರಂಭಗೊಳ್ಳುತ್ತಿದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ಹಲವು ರೈಲು ಸೇವೆ ರದ್ದಾಗುತ್ತಿದೆ. ಈ ಕುರಿತು ನೈರುತ್ಯ ರೈಲ್ವೆ ಪ್ರಕಟಣೆ ಹೊರಡಿಸಿದೆ.
ಯಾವಾಗ ರೈಲು ಸಂಚಾರಗಳು ರದ್ದು: ರೈಲ್ವೇ ವಿದ್ಯುದ್ದೀಕರಣ ಕಾಮಗಾರಿ ಹಿನ್ನಲೆಯಲ್ಲಿ ಬೆಂಗಳೂರು-ಮಂಗಳೂರು ರೈಲ್ವೇ ಸೇವೆಯಲ್ಲಿ ವ್ಯತ್ಯಯವಾಗುತ್ತಿದೆ. ನವೆಂಬರ್ 2 ರಿಂದ ಕಾಮಗಾರಿ ಆರಂಭಗೊಳ್ಳಲಿದೆ. ಡಿಸೆಂಬರ್ 15ರ ವರೆಗೆ ಕಾಮಗಾರಿ ನಡೆಯಲಿದೆ. ಹೀಗಾಗಿ ಈ ಸಮಯದಲ್ಲಿ ಹಲವು ರೈಲು ಸಂಚಾರ ರದ್ದಾಗುತ್ತಿದೆ. ಪ್ರತಿ ದಿನ ನಾಲ್ಕು ಗಂಟೆಗಳ ಕಾಲ ಲೈನ್ ಬ್ಲಾಕ್ ತೆರೆದುಕೊಳ್ಳಲಿದೆ.




