ಉಪ್ಪಳಿಗೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಆರೋಪದಲ್ಲಿ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಅ.20ರಂದು ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಆರ್.ಎಸ್.ಎಸ್. ಪ್ರತಿನಿಧಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಮಾಡಿದ ಭಾಷಣ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ ಉಂಟು ಮಾಡುವಂತಿದೆ ಅವರು ಹಿಂದೂ-ಮುಸ್ಲಿಂ ಸಮುದಾಯಗಳ ಬಗ್ಗೆ ಅವಮಾನಕಾರಿ ಹೇಳಿಕೆಗಳನ್ನು ನೀಡಿ, ಮತದಾರರ ಸಂಖ್ಯೆಯ ಉಲ್ಲೇಖ ಮಾಡಿ ಧಾರ್ಮಿಕ ವೈಮನಸ್ಸು ಉಂಟುಮಾಡಿದ್ದಾರೆ ಎಂದು ದೂರುದಾರರಾದ ಈಶ್ವರಿ ಪದ್ಮುಂಜ ಎಂಬವರು ನೀಡಿದ ದೂರಿನ ಅನ್ವಯ ದಿನಾಂಕ 25-10-2025ರಂದು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅಪರಾಧ ಕ್ರಮಾಂಕ 118/2025, ಭಾರತೀಯ ನ್ಯಾಯ ಸಂಹಿತೆ (BNS) 79, 196, 299, 302 ಹಾಗೂ 3(5) ಕಲಂಗಳ ಅಡಿಯಲ್ಲಿ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.




