February 1, 2026

ಮಂಗಳೂರು: ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ ದೋಣಿ: ಕೋಸ್ಟ್ ಗಾರ್ಡ್ ಸಹಾಯದಿಂದ 31 ಮೀನುಗಾರರ ರಕ್ಷಣೆ

0
n686507913176147315601005d91f42c0873b95554466b00a6e7240f766c646ca444f949467bcd0990b0b83.jpg

ಮಂಗಳೂರು: ಸ್ಟೀಯರಿಂಗ್ ಗೇರ್ ದೋಷದಿಂದಾಗಿ ನಿಯಂತ್ರಣ ತಪ್ಪಿದ್ದ ದೋಣಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 31 ಮಂದಿ ಮೀನುಗಾರರನ್ನು ಕೋಸ್ಟ್ ಗಾರ್ಡ್ ಕಾರ್ಯಾಚರಣೆ ನಡೆಸಿ ರಕ್ಷಣೆ ನಡೆಸಿದೆ.

ಅ.24ರಂದು ಗೋವಾ ತೀರದಲ್ಲಿ ಕಾಣಿಸಿಕೊಂಡಿದ್ದ ಈ ಬೋಟ್ ಬಳಿಕ ಕಾಣೆಯಾಗಿತ್ತು. ಮಾಹಿತಿ ಪಡೆದ ಕೋಸ್ಟ್ ಗಾರ್ಡ್ ಅಧಿಕಾರಿಗಳು ಸಿಬ್ಬಂದಿ ಮೂಲಕ ಹುಡುಕಾಟ ಆರಂಭಿಸಿದರೂ ಪ್ರಯೋಜನವಾಗಲಿಲ್ಲ. ಕೆಲವು ದಿನದಿಂದ ಸುರಿಯುವ ಭಾರೀ ಮಳೆ, ಗಾಳಿಗೆ ಸಮುದ್ರ ಪ್ರಕ್ಷುಬ್ಧಗೊಂಡಿತ್ತು.

ಈ ವೇಳೆ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಾಪತ್ತೆಯಾಗಿತ್ತು. ಬೋಟ್ ಪತ್ತೆಗೆ ಪ್ರಯತ್ನಿಸಿದರೂ ಫಲಿಸಿರಲಿಲ್ಲ. ಅಂತಿಮವಾಗಿ ಕೊಚ್ಚಿಯಿಂದ ಏರ್ ಕ್ರಾಫ್ಟ್ ತರಿಸಿ ಹುಡುಕಾಟ ಮುಂದುವರಿಸಲಾಯಿತು. ಶನಿವಾರ ಅಪಾಯಕ್ಕೆ ಸಿಲುಕಿದ್ದ ಬೋಟ್ ಅನ್ನು ಪತ್ತೆಹಚ್ಚಲಾಗಿದ್ದು, ಅದರಲ್ಲಿದ್ದ 31 ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ಕೋಸ್ಟ್ ಗಾರ್ಡ್ ಪ್ರಕಟನೆ ತಿಳಿಸಿದೆ.

ಅ.25ರಂದು ಕರಾವಳಿ ರಕ್ಷಕ ದಳದ ಸಿಬಂದಿಗಳು ತಾಂತ್ರಿಕ ಮತ್ತು ಲಾಜಿಸ್ಟಿಕ್ ನೆರವು ನೀಡಿದ್ದಾರೆ. ಸ್ಟೀರಿಂಗ್ ದೋಷ ಸರಿಪಡಿಸಿ, ಹೊನ್ನಾವರ ಮೀನುಗಾರಿಕಾ ಬಂದರಿಗೆ ಎಳೆದು ತರುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!