February 1, 2026

ಚಿಕ್ಕಮಗಳೂರು: ಹೋಂ ಸ್ಟೇ ಬಾತ್ ರೂಂನಲ್ಲಿ ಯುವತಿ ಅನುಮಾನಾಸ್ಪದ ಸಾವು

0
n68645346617614736387809c465938c005d33ac25fc0a455b6c3bc801cc9c93908ffb9902d645aa4443302.jpg

ಚಿಕ್ಕಮಗಳೂರು: ಬೇಲೂರಿನ ಯುವತಿಯೊಬ್ಬಳು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೋಂ ಸ್ಟೇವೊಂದರ ಬಾತ್ ರೂಂನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕು ದೇವಲಾಪುರ ಮೂಲದ ದೇವರಾಜು ಗೌಡ ಎಂಬವರ ಪುತ್ರಿ ರಂಜಿತಾ (27) ಮೃತಪಟ್ಟವರು.

ತನ್ನ ಗೆಳತಿ ದಾವಣಗೆರೆ ಮೂಲದ ರೇಖಾ ಎಂಬುವವರೊಂದಿಗೆ ಶುಕ್ರವಾರ ಹಿಪ್ಲ ಹೋಂ ಸ್ಟೇ ನಲ್ಲಿ ತಂಗಿದ್ದ ರಂಜಿತಾ ಶನಿವಾರ ಬೆಳಿಗ್ಗೆ ಸುಮಾರು 9 ಗಂಟೆಯ ಸಮಯದಲ್ಲಿ ಸ್ನಾನದ ಗೃಹದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ರೇಖಾ ಎಂ ಎಸ್ಸಿ ಪದವೀದರೆಯಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇಬ್ಬರೂ ತಮ್ಮ ಸ್ನೇಹಿತೆಯೊಬ್ಬರ ನಿಶ್ಚಿತಾರ್ಥ ಕಾರ್ಯಕ್ರಮಕ್ಕಾಗಿ ಮೂಡಿಗೆರೆಗೆ ಬಂದಿದ್ದರು. ಶುಕ್ರವಾರ ಸಂಜೆ ಹಾಂದಿ ಸಮೀಪದ ಹೋಂ ಸ್ಟೇನಲ್ಲಿ ತಂಗಿದ್ದರು ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!